ಪುತ್ತೂರು: ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಮರವೊಂದು ಧರೆಗುರುಳಿದ ಘಟನೆ ರೋಟರಿಪುರದಲ್ಲಿ ಮೇ.26 ರಂದು ತಡರಾತ್ರಿ ನಡೆದಿದೆ.
ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಮರ ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.