
ಆಲಂಕಾರು: ಆಲಂಕಾರು ಗ್ರಾ.ಪಂ ಸಭಾಭವನದಲ್ಲಿ ಆಲಂಕಾರು, ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನದ ಸಭೆ ನಡೆಯಿತು. ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಮಾತನಾಡಿ, ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಗೃಹಲಕ್ಷ್ಮೀ ,ಗೃಹ ಜ್ಯೋತಿ ,ಶಕ್ತಿಯೋಜನೆ,ಅನ್ನಭಾಗ್ಯ,ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಡಬ ತಾಲ್ಲೂಕಿನಲ್ಲಿ ವಿವಿಧ ಗ್ರಾ.ಪಂ ನ ಸಹಕಾರದೊಂದಿಗೆ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದ ಸಭೆಯನ್ನು ಆಯೋಜಿಸಿರುವುದಾಗಿ ತಿಳಿಸಿ ಈ ಕಾರ್ಯಕ್ರಮ ವನ್ನು ದೇಶದಲ್ಲೇ ಮೊಟ್ಟಮೊದಲು ಜಾರಿಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದರು.
ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಹಕರಿಸಿದ ಜಿಲ್ಲಾಧಿಕಾರಿಗಳಿಗೆ, ಎಲ್ಲಾ ಇಲಾಖಾಧಿಕಾರಿಗಳಿಗೆ ಮತ್ತು ಪುತ್ತೂರು,ಕಡಬ ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಿಗೆ ಕೃತಜ್ಞತೆ ಸಲ್ಲಿಸಿದರು.
ಕಡಬ ತಾಲೂಕಿಗೆ ಗ್ಯಾರಂಟಿ ಯೋಜನೆಯಲ್ಲಿ ಒಟ್ಟು 184,74,37,365 ಹಣ ಬಂದಿರುವುದಾಗಿ ತಿಳಿಸಿ,ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುತ್ತಿದ್ದು, ಜನರು ಇದರ ಪ್ರಯೋಜನವನ್ನು ಪಡೆದು ಆರ್ಥಿಕ ಸದೃಡರಾಗಬೇಕು ಎಂದು ತಿಳಿಸಿ ಗ್ಯಾರಂಟಿ ಯೋಜನೆಯಲ್ಲಿ ವಂಚಿತ ಫಲಾನುಭವಿಗಳ ಪಟ್ಟಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಮೂಲಕ ಪಟ್ಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯವುದಾಗಿ ತಿಳಿಸಿ, ಕಡಬ ತಾಲೂಕಿಗೆ ಗ್ಯಾರಂಟಿ ಯೋಜನೆಯಲ್ಲಿ ಒಟ್ಟು 184,74,37,365 ರೂಪಾಯಿ ಅನುದಾನ ಬಂದಿರುವುದಾಗಿ ತಿಳಿಸಿದರು.
ಕಡಬ ತಾ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿಯವರು ಮಾತನಾಡಿ, ಸರಕಾರದ ಪಂಚ ಗ್ಯಾರಂಟಿ ಯೋಜನೆ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅನುಷ್ಠಾನ ಗೊಂಡಿದ್ದು ಇದು ದೇಶದಲ್ಲೇ ಗುರುತಿಸುವ ಕಾರ್ಯಕ್ರಮವಾಗಿದೆ.ಗ್ಯಾರಂಟಿ ಯೋಜನೆಯಿಂದ ಜನರ ಆರ್ಥಿಕ ಮಟ್ಟ ಸುಧಾರಣೆಯಾಗಿದ್ದು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿ ಇದಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಹಕರಿಸುವುದಾಗಿ ತಿಳಿಸಿ ಡಿ.ಬಿ.ಟಿಯ ಮೂಲಕ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿರುವುದು ಬಹಳ ಸಂತೋಷದ ವಿಚಾರವಾಗಿದ್ದು ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳುವಂತೆ ವಿನಂತಿಸಿದರು.
ಮೆಸ್ಕಾಂ ಇಲಾಖೆಯಿಂದ ಕೃಷ್ಣಮೂರ್ತಿ,ಉದ್ಯೋಗ ವಿನಿಮಯ ಕಛೇರಿಯ ಮಂಜೂಷಾ, ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಸದಸ್ಯರಾದ ಗಂಗಾಧರ ಶೆಟ್ಟಿ, ಉಷಾ ಅಂಚನ್ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲಾ, ಪೆರಾಬೆ ಗ್ರಾ.ಪಂ ಅಧ್ಯಕ್ಷರಾದ ಸಂಧ್ಯಾ ಫಲಾನುಭವಿ ಬೇಬಿ ಯವರು ಸಂದರ್ಭೋಚಿತವಾಗಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಯ ಬಗ್ಗೆ ತಿಳಿಸಿ ಇದರ ಪ್ರಯೋಜನವನ್ನು ಸಭೆಗೆ ತಿಳಿಸಿದರು.ವೇದಿಕೆಯಲ್ಲಿ ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಸತೀಶ್,ಅವಿನಾಶ್, ಬಶೀರ್,ಹನೀಪ್,ಗೌರಿ.ಕೆ,ಹರಿಣಾಕ್ಷಿ,ರಾಘವೇಂದ್ರ ಗೌಡ,ಭವಾನಿ ಶಂಕರ್,ಸೈಮನ್,ನವರು ಉಪಸ್ಥಿತರಿದ್ದರು.
ಆಲಂಕಾರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ.ಕೆ ಸ್ವಾಗತಿಸಿ, ಪೆರಾಬೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಾಲಿನಿ ಧನ್ಯವಾದ ಸಮರ್ಪಸಿದರು.ಆಲಂಕಾರು ಗ್ರಾ.ಪಂ ಕಾರ್ಯದರ್ಶಿ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಲಂಕಾರು, ಪೆರಾಬೆ ಗ್ರಾ.ಪಂ ಸಿಬ್ಬಂದಿ ಗಳು ಸಹಕರಿಸಿದರು. ಕಾರ್ಯಕ್ರಮದಲ್ಲಿ ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಫಲಾನುಭವಿಗಳು,ಊರವರು ಉಪಸ್ಥಿತರಿದ್ದರು.