ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು, ಸಹಕಾರ ಇಲಾಖೆ ದ.ಕ.ಜಿಲ್ಲೆ ಹಾಗೂ ಸಂತ ಪೀಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಪ್ರಯುಕ್ತ ಸ್ವಚ್ಚತಾ ಸೇ ಸಹಕಾರ್ ಕಾರ್ಯಕ್ರಮ ಮೇ.28ರಂದು ಬೆಳಿಗ್ಗೆ 10ರಿಂದ ಸಂತ ಫಿಲೋಮಿನಾ ಕಾಲೇಜಿ(ಸ್ವಾಯತ್ತ)ನಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಲಿದ್ದಾರೆ. ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್ ಮೊಂತೆರೊ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ||ಎಸ್.ಆರ್.ಹರೀಶ್ ಆಚಾರ್ಯ ವಿಷಯ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಮಂಜುನಾಥ ಎನ್.ಎಸ್., ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್ ಹಾಗೂ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಷ್.ಎನ್.ರಘು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.