ಅತಿಥಿ ಶಿಕ್ಷಕರ ಆಯ್ಕೆ ವೇಳೆ ಪರಿಗಣಿಸುವಂತೆ ಶಾಸಕರಿಗೆ ಮನವಿ

0

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಕೊಡುವ ಸಲುವಾಗಿ ಅತಿಥಿ ಶಿಕ್ಷಕರ ಆಯ್ಕೆ ಸಂದರ್ಭದಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಅತಿಥಿ ಶಿಕ್ಷಕರಿಗೆ ಮೊದಲ ಆದ್ಯತೆಯನ್ನು ನೀಡಿ ಆಯ್ಕೆ ಪ್ರಕ್ರಿಯೆಯನ್ನು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡುವಂತೆ ಪುತ್ತೂರು ಶಾಸಕರಿಗೆ ಅತಿಥಿ ಶಿಕ್ಷಕರು ಮನವಿ ಮಾಡಿದ್ದಾರೆ.


ಕೆಲವು ಶಾಲೆಗಳಲ್ಲಿ ಹಿಂದೆ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಅವಕಾಶ ಕೊಡದೆ ಮುಖ್ಯಗುರುಗಳು ಹಾಗೂ ಸಿಆರ್‌ಪಿಗಳ ಸಂಬಂಧಿಕರಿಗೆ ಹಾಗೂ ಅವರಿಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡು ಹಲವಾರು ವರ್ಷಗಳ ಅನುಭವ ಹೊಂದಿರುವ ಶಿಕ್ಷಕರು ಇದೇ ಉದ್ಯೋಗವನ್ನು ನಂಬಿಕೊಂಡಿರುವವರಿಗೆ ಬಹಳ ಅನ್ಯಾಯವಾಗುತ್ತದೆ. ಇನ್ನು ಒಂದು ವಿಚಾರ ದತ್ತು ಪಡೆದುಕೊಂಡಿರುವ ಶಾಲೆಗಳು ಟ್ರಸ್ಟ್ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಸಿ ಮತ್ತೆ ಅದೇ ಶಿಕ್ಷಕರನ್ನು ಅತಿಥಿ ಶಿಕ್ಷಕರು ಎಂದು ಪರಿಗಣಿಸಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದವರಿಗೆ ಅನ್ಯಾಯವಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ತಾವು ಮನಗಂಡು ಇದರ ಬಗ್ಗೆ ಸೂಕ್ತಕ್ರಮ ಕೈಗೊಂಡು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲಹೆ ಸೂಚನೆ ನೀಡಬೇಕಾಗಿ ಶಾಸಕರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಚಿತ್ರಲೇಖ, ತಾಲೂಕು ಘಟಕದ ಶಿಕ್ಷಕರಾದ ಸುಂದರಿ, ಸುಮಿತ್ರ, ನಂದಿನಿ ಹಾಗೂ ಸೌಮ್ಯ ಉಪಸ್ಥಿತರಿದ್ದರು. ಶಾಸಕರು ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here