ಪುತ್ತೂರು:ಬಂಟ್ವಾಳದಲ್ಲಿ ಯುವಕನೋರ್ವನ ಭೀಕರ ಕೊಲೆ ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು,ಕಡಬ ಸೇರಿದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಹೀಂ ಎಂಬವರ ಕೊಲೆ ಘಟನೆ ಬಳಿಕ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಪುತ್ತೂರು,ಕಡಬ,ಬಂಟ್ವಾಳ,ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ದ.ಕ.ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
ಪುತ್ತೂರಿನಲ್ಲೂ ಹೈಅಲರ್ಟ್:
ರಹೀಂ ಅವರ ಕೊಲೆಯ ಹಿನ್ನೆಲೆಯಲ್ಲಿ ಪುತ್ತೂರುನಲ್ಲೂ ಪೊಲೀಸರು ಹೈಅಲರ್ಟ್ ಆಗಿದ್ದು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.