ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.