ಪುತ್ತೂರು: ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಪವರ್ ಲಿಪ್ಟಿಂಗ್ ಚಾಂಪಿಯನ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಈರ್ವರು ಕ್ರೀಡಾಪಟುಗಳು ಸಾಧನೆ ಮೆರೆದಿದ್ದಾರೆ.
105 ಕೆ.ಜಿ ವಿಭಾಗದಲ್ಲಿ ದ್ವಿತೀಯ ಬಿಎ ವಿಭಾಗದ ರಂಜಿತ್ ಕುಮಾರ್ ರವರು ಬೆಳ್ಳಿ ಪದಕ, 93 ಕೆ.ಜಿ ವಿಭಾಗದಲ್ಲಿ ಅಂತಿಮ ಬಿಕಾಂನ ಶಬರೀಶ್ ರವರು ಕಂಚಿನ ಪದಕ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ|ಎಲ್ಯಾಸ್ ಪಿಂಟೊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.