ಆಲಂಕಾರು: ಸೀಮಾ ದೇವಸ್ಥಾನ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ಸಮಗ್ರ ಜೀರ್ಣೋದ್ಧಾರ ಕೆಲಸ ಕಾರ್ಯ ನಡೆಯುತ್ತಿದ್ದು, ದೇವಸ್ಥಾನದ ಶಿಲಾಮಯ ಧ್ವಜಸ್ತಂಭಕ್ಕೆ ಆಲಂಕಾರು ಪೇಟೆಯಲ್ಲಿ ಆರ್ಚಕ ರಾಘವೇಂದ್ರ ಪ್ರಸಾದ್ ರವರು ಪೂಜಾ ವಿಧಿವಿಧಾನ ನೇರವೆರಿಸಿ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು.
ಜಿಲ್ಲೆಯಲ್ಲಿ ನಿಷೇದಾಜ್ಞೆ ಇರುವ ಹಿನ್ನಲೆಯಲ್ಲಿ ಕಾರ್ಯಕ್ರಮವು ಸರಳ ರೀತಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ರಾವ್.ಕೆ ಮತ್ತು ಸದಸ್ಯರು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಪಡ್ಡಿಲ್ಲಾಯ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು ಮತ್ತು ಪದಾಧಿಕಾರಿಗಳು, ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.
