ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್  – ಇಂದು ಅಂಗನವಾಡಿ, ಶಾಲೆಗಳಿಗೆ ರಜೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು  ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮ: 

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

5. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

6. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ನನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ – 1077

0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here