





ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಘದ ಸದಸ್ಯರ ಮತ್ತು ಗ್ರಾಹಕರ ಸಮಾವೇಶ ಹಾಗೂ ಕೃಷಿ ಮಾಹಿತಿ ಕಾರ್ಯಾಗಾರವು ಮೇ.31ರಂದು ಬೆಳಿಗ್ಗೆ ಗಂಟೆ 10ಕ್ಕೆ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಲಿದ್ದು, ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ನಿವೃತ್ತ ಪ್ರಧಾನ ವಿಜ್ಞಾನಿ ಡಾ. ಯದುಕುಮಾರ್ ಕೊಳತ್ತಾಯರವರು ಕಾಳುಮೆಣಸು ಕೃಷಿ ಮತ್ತು ಪೋಷಕಾಂಶಗಳ ನಿರ್ವಹಣೆ ಬಗ್ಗೆ ಮಾಹಿತಿ-ಸಂವಾದ ನಡೆಸಲಿದ್ದಾರೆ. ಸಂಘದ ಸದಸ್ಯರುಗಳು ಮತ್ತು ಗ್ರಾಹಕರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











