ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನ ವಿಶೇಷ ಮಹಿಳಾ ಗ್ರಾಮಸಭೆಯು ಮೇ.31 ರಂದು ಬೆಳಿಗ್ಗೆ ಗ್ರಾಪಂ ಕಛೇರಿ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಮಹಿಳೆಯರಿಗೆ ಸಂಬಂಧಪಟ್ಟಂತೆ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.