ಸವಣೂರು :ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ.ಸೀತಾರಾಮ ರೈ ಅವರು ಮಾತನಾಡಿ, ವಿದ್ಯಾರ್ಥಿಗಳು ಸಂಸ್ಥೆಯ ರಾಯಭಾರಿಗಳಂತೆ ಕಾರ್ಯವನ್ನು ನಿರ್ವಹಿಸುವವರು ಎನ್ನುತ್ತಾ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭವನ್ನು ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅವರು ಮಾತನಾಡಿ, ಸಮಯ ಮತ್ತು ಶ್ರಮಕ್ಕೆ ಇರುವ ಮೌಲ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಶೇಷಗಿರಿ ಎಂ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪವನ್, ಪ್ರಸ್ತುತಿ, ಮಹಮ್ಮದ್ ಅನಾಸ್ , ಅಶ್ಮಿತ್, ಅಭೀಜ್ಞಾ, ನಿಶ್ಚಿತಾ ಹಾಗೂ ಚೇತನ್ ಕುಮಾರ್ ಅನಿಸಿಕೆ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿ ಕಲ್ಪನಾ ಸ್ವಾಗತಿಸಿ ವಂದಿಸಿದರು. ಅಲೀಮತ್ ಸಝಾನ ನಿರೂಪಿಸಿದರು.