ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

0

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಹನುಮಾನ್ ನಗರ ಕಡಬದಲ್ಲಿ ಶಾಲಾ ಪ್ರಾರಂಭೋತ್ಸವವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಶಿಕ್ಷಕರು ಆರತಿ ಬೆಳಗಿಸಿ, ತಿಲಕವಿಟ್ಟು, ಸಿಹಿ ನೀಡುವುದರೊಂದಿಗೆ ತರಗತಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ನಿರ್ದೇಶಕರಾದ ಕೃಷ್ಣ ಶೆಟ್ಟಿ ಕಡಬ ಮತ್ತು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಭಟ್ ಇವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ವಸಂತ ಕೆ. ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here