ನೆಲ್ಯಾಡಿ: ಕೊಣಾಲು ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಥಿಲಗೊಂಡ 5 ಕೊಠಡಿಯ ಹಳೆಕಟ್ಟಡವನ್ನು ಕೆಡವಿ ಸಾಮಾಗ್ರಿಗಳ ವಿಲೇವಾರಿಗೆ ಸಂಬಂಧಿಸಿ ಜೂ.7ರಂದು ನಡೆಯಬೇಕಿದ್ದ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಜೂ.9ಕ್ಕೆ ಮುಂದೂಡಲಾಗಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಶಾಲಾ ಹಳೆ ಕಟ್ಟಡವನ್ನು ಕೆಡವಿ ಸದ್ರಿ ಕಟ್ಟಡದ ಹಂಚು, ಪಕ್ಕಾಸು, ರೀಪು, ಕಬ್ಬಿಣದ ಸರಳು, ಕಿಟಕಿ, ಬಾಗಿಲು, ಮರಮಟ್ಟುಗಳನ್ನು ವಿಲೇವಾರಿ ಮಾಡುವ ಸಂಬಂಧ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಜೂ.7ರಂದು ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಅನಿವಾರ್ಯ ಕಾರಣಗಳಿಂದ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಜೂ.9ರಂದು ಬೆಳಿಗ್ಗೆ 11 ಗಂಟೆಗೆ ಶಾಲಾ ಕಚೇರಿ ಮುಂಭಾಗದಲ್ಲಿ ಬಹಿರಂಗ ಹರಾಜು ನಡೆಸಲಾಗುವುದು ಎಂದು ಶಾಲಾ ಪ್ರಕಟಣೆ ತಿಳಿಸಿದೆ.