ವಿಟ್ಲ: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಇಡ್ಕಿದು ಒಕ್ಕೂಟದ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮ ವನ್ನು ಜನಜಾಗೃತಿ ವಲಯಾಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ ಜಯಪ್ರಕಾಶ್ ರವರು ಮಾಹಿತಿ ನೀಡಿದರು.
ಮಾಣಿ ವಲಯ ಮೆಲ್ವಿಚಾರಕಿ ಆಶಾ ಪಾರ್ವತಿ ಕಾರ್ಯಕ್ರಮದ ಔಚಿತ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಪುಷ್ಪಲತಾ ಸ್ವಾಗತಿಸಿ,ಜಯಕರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.