ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆ ಪುತ್ತೂರು ಇದರ ಸಹಯೋಗದೊಂದಿಗೆ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜೂ.1ರಂದು ಆದಿತ್ಯವಾರ ಬೆಳಿಗ್ಗೆಯಿಂದ ಸಂಜೆವರೆಗೆ ಬೊಳ್ವಾರು ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜರಗಿತು.

ರಕ್ತದೊತ್ತಡ, ಮಧುಮೇಹ, ಇಸಿಜಿ, ಸೇವ್ ಹಾರ್ಟ್ ಪರೀಕ್ಷೆ, ಶ್ವಾಸಕೋಶ, ಥೈರಾಯಿಡ್, ಲಿವರ್ ಫೈಬ್ರೋಸ್ಕ್ಯಾನ್ ಮತ್ತು ಮಕ್ಕಳ ಆರೋಗ್ಯ ತಪಾಸಣೆ ನಡೆದಿದ್ದು, ತಜ್ಞ ವೈದ್ಯರಿಂದ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು ಹಾಗೂ ಹೆಚ್ಚಿನ ಮಾಹಿತಿಗಾಗಿ 9483127777, 9448126326, 9483787876 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here