ಬೊಬ್ಬೆಕೇರಿ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವವು ಸಂಭ್ರಮ ಸಡಗರದಿಂದ ಜೂ.2ರಂದು ನಡೆಯಿತು. ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಚಂದ್ರ ರೈ ಕುಮೇರು, ಸುನಂದ ಅಬ್ಬಡ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋಧ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ ಹಾಗೂ ಎಸ್. ಡಿ.ಎಂ.ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ವಂದಿಸಿದರು.

ಆರತಿ ಮೂಲಕ ಮಕ್ಕಳಿಗೆ ಸ್ವಾಗತ:

ವಿದ್ಯಾರ್ಥಿಗಳು ಬ್ಯಾಂಡ್, ವಾದ್ಯ ದೊಂದಿಗೆ ಮೆರವಣಿಗೆಯ ಮೂಲಕ ಶಾಲೆಗೆ ಸಾಗಿ, ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ, ತಿಲಕವನ್ನಿಟ್ಟು, ಸಿಹಿ ತಿಂಡಿ ವಿತರಿಸುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here