ಸಜಂಕಾಡಿ ಸರಕಾರಿ ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ದ.ಕ ಜಿ ಪಂ ಹಿ ಪ್ರಾ ಶಾಲೆ ಸಜಂಕಾಡಿಯಲ್ಲಿ 2025-26ನೇ ಶಾಲಾ ಪ್ರಾರಂಭೋತ್ಸವವು ನಡೆಯಿತು . ವಿದ್ಯಾರ್ಥಿಗಳನ್ನು ಪುಷ್ಪಸಿಂಚನದ ಮೂಲಕ ಸ್ವಾಗತಿಸಲಾಯಿತು . ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಯಶೋಧ ಶಾಲೆಗೆ ಬರಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು .ಹಿರಿಯ ಶಿಕ್ಷಕಿ ಶಶಿಕಲಾ ಬಿ.ಎನ್ ,ಎಸ್ .ಡಿ.ಎಂ.ಸಿ ಉಪಾಧ್ಯಕ್ಷ ಇಬ್ರಾಹಿಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಗುರು ಸುಮಲತಾ ಪಿ.ಕೆ ಪ್ರಾಸ್ತಾವಿಸಿ ,ಸ್ವಾಗತಿಸಿದರು. ಶಿಕ್ಷಕ ಗಣೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು .ಅತಿಥಿ ಶಿಕ್ಷಕಿ ಮಿಸ್ರಿಯಾ ಸಹಕರಿಸಿದರು .ಶಾಲಾಭಿವೃದ್ಧಿ ಸಮಿತಿ ಸದಸ್ಯರೂ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here