





ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.



ಶಾಲಾ ವಿದ್ಯಾರ್ಥಿಗಳನ್ನು ಮೆರವಣಿಗೆ, ಬ್ಯಾಂಡ್, ವಾದ್ಯಘೋಷದೊಂದಿಗೆ ಕರೆ ತಂದು ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಆರತಿ ಮಾಡಿ ಪುಷ್ಪವನ್ನು ನೀಡಿ ಸ್ವಾಗತಿಸಲಾಯಿತು. ಬಳಿಕ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೂ, ಪುಷ್ಪವನ್ನು ನೀಡುವುದರ ಮೂಲಕ ಸ್ವಾಗತಿಸಲಾಯಿತು. ಶಾಲಾ ಮುಖ್ಯ ಗುರುಗಳಾದ ಕಮಲರವರು ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.






ಎಸ್ ಡಿ ಎಂ ಸಿ ಅಧ್ಯಕ್ಷರಾದ ಹನೀಫ್ ರೆಂಜಲಾಡಿಯವರು, ಶಾಲಾಭಿವೃದ್ಧಿ ಬಗ್ಗೆ ಮಾತನಾಡಿದರು, ಆರ್‌ಐಸಿ ಚೇರ್‌ಮೆನ್ ಕೆ.ಆರ್. ಹುಸೈನ್ ದಾರಿಮಿ ರೆಂಜಲಾಡಿ ಮಕ್ಕಳಿಗೆ ಮೌಲ್ಯಗಳ ಬಗ್ಗೆ ತಿಳಿಸಿ ಕೊಟ್ಟರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ ಸೊರಕೆ ಹಾಗೂ ಸರ್ವ ಸದಸ್ಯರು, ಪೋಷಕರು,ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ವೃಂದದವರು ಕಾರ್ಯಕ್ರಮ ನಡೆಸಿ ಕೊಟ್ಟರು. ಕೊನೆಯಲ್ಲಿ ಎಸ್‌ಡಿಎಂಸಿ ಸದಸ್ಯರಾದ ಗಣೇಶ್ ನೇರೋಳ್ತಡ್ಕರವರು ಸಿಹಿ ಹಂಚಿದರು.










