ಕಾಣಿಯೂರು: ದ ಕ ಜೆ ಹಿ ಪ್ರಾ ಶಾಲೆ ನಾಣಿಲದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜೂ 2ರಂದು ಜರಗಿತು. ಮಕ್ಕಳನ್ನು ಮೆರವಣಿಗೆಯೊಂದಿಗೆ, ಗುಲಾಬಿ ಹೂವು ನೀಡುವ ಮೂಲಕ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಪೋಷಕರ ಜೊತೆಗೂಡಿ ಬರಮಾಡಿಕೊಳ್ಳಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ದಲಾರಿಯವರು ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಸರಕಾರದಿಂದ ಕೊಡುವ ಪಠ್ಯಪುಸ್ತಕವನ್ನು ವಿತರಿಸಲಾಯಿತು. ಶಾಲಾ ಮುಖ್ಯಗುರು ಪದ್ಮಯ ಗೌಡ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಸಹಶಿಕ್ಷಕಿ ಮೋಹಿನಿ ಎನ್ ವಂದಿಸಿದರು.