ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರಾರಂಭೋತ್ಸವ

0

ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಮತ್ತು ನೂತನ ಪ್ರಾಂಶುಪಾಲ ಡಾ. ಅಬ್ದುಲ್ ರಜಾಕ್ ಇವರ ಸ್ವಾಗತ ಕಾರ್ಯಕ್ರಮ ಜೂ.2ರಂದು ನಡೆಸಲಾಯಿತು.

ಪ್ರಾಂಶುಪಾಲರಾದ ಡಾ. ಅಬ್ದುಲ್ ರಜಾಕ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಕಾಲೇಜಿನ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಕರ್ಕೇರ ಪ್ರಾಂಶುಪಾಲರನ್ನು ಸನ್ಮಾನಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸತೀಶ್ ಶೆಟ್ಟಿ, ಹರೀಶ್ ಕುಮಾರ್, ಮೊಯ್ದು ಕುಂಞ, ಸುಬ್ರಹ್ಮಣ್ಯ ರಾವ್ ಸಭೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಡಗೀತೆ ಹಾಡಿ, ಕುಮಾರಿ ಪಲ್ಲವಿ ಪ್ರಾರ್ಥಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕ ಸೈಯದ್ ಫಾರೂಕ್ ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕಿ ಗಾಯತ್ರಿ ವಂದಿಸಿದರು. ಇತಿಹಾಸ ಉಪನ್ಯಾಸಕಿ ರಜನಿ. ಬಿ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರು ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here