ಈಶ್ವರಮಂಗಲ: ಗಜಾನನ ಆಂಗ್ಲ ಮಾಧ್ಯಮ ಶಾಲೆ ಹನುಮಗಿರಿ ಈಶ್ವರಮಂಗಲ ಇಲ್ಲಿ ಹೊಸದಾಗಿ ಆರಂಭಗೊಂಡ ಪ್ರಿ.ಕೆ.ಜಿ ತರಗತಿಯ ಉದ್ಘಾಟನೆ ಹಾಗೂ ನೂತನ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಶಾಲಾ ಸಂಚಾಲಕರಾದ ಶಿವರಾಮ ಪಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲರಾದ ಕೆ ಶಾಮಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲಾ ಆಡಳಿತ ಸಮಿತಿಯ ಸದಸ್ಯ ನಾಗಪ್ಪ ಗೌಡ ಬೊಮ್ಮೆಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಪೆನ್ಸಿಲ್ ಮತ್ತು ಪೆನ್ ವಿತರಿಸಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಸತ್ಯಪ್ರಕಾಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಾದ ಸೌಮ್ಯ ಎ ಹಾಗೂ ಲತಾ ಡಿ ಕೆ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಎ ಸ್ವಾಗತಿಸಿದರು. ಶಿಕ್ಷಕಿ ಪ್ರಮೀಳ ಅವರು ವಂದಿಸಿದರು. ಶಿಕ್ಷಕಿ ಧನಲಕ್ಷಿ ಕಾರ್ಯಕ್ರಮ ನಿರೂಪಿಸಿದರು.