ಸಂತ ವಿಕ್ಟರನ ಆ.ಮಾ. ಶಾಲಾ ಪ್ರಾರಂಭೋತ್ಸವ

0

ಪುತ್ತೂರು: ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶಾಲಾ ಪ್ರಾರಂಭೋತ್ಸವದ ಮೂಲಕ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.
ಒಂದರಿಂದ ಏಳನೇ ತರಗತಿವರೆಗಿನ ಹೊಸ ದಾಖಲಾತಿ ಹೊಂದಿದ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯದ ಮೂಲಕ ಶಾಲಾ ಆವರಣಕ್ಕೆ ಬರಮಾಡಿಕೊಳ್ಳಲಾಯಿತು. ಪೂರ್ಣ ಕುಂಭ ಸ್ವಾಗತದೊಂದಿಗೆ ಗುಲಾಬಿ ನೀರನ್ನು ಸಿಂಪಡಿಸಿ ಹೂ ಹಾಕಿ ಶಾಲೆಯೊಳಗೆ ಕರೆತರಲಾಯಿತು. ಶಾಲಾ ಸಂಚಾಲಕ ವಂ| ಲಾರೆನ್ಸ್ ಮಸ್ಕರೇನಸ್ ದೀಪ ಉರಿಸಿ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿ ಆಶೀರ್ವಚನ ನೀಡಿದರು. ಶಾಲೆಯಲ್ಲಿ ಪ್ರಾರ್ಥನಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ವಿದ್ಯಾರ್ಥಿಗಳಿಗೆ ಮೊದಲನೇ ದಿನದ ಅನುಭವವನ್ನು ಹೆಚ್ಚಿಸಲು ಸೆಲ್ಫಿ ಪಾಯಿಂಟ್ ಮಾಡಲಾಗಿತ್ತು. ಎಲ್ಲಾ ಹೊಸ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕಿ ಲೀನಾ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಗೀತಾ ಲೋಬೋ ಸ್ವಾಗತಿಸಿದರು. ಒಲಿವಿಯಾ ವಂದಿಸಿದರು.

LEAVE A REPLY

Please enter your comment!
Please enter your name here