ಒಂದೇ ಸೂರಿನಡಿಯಲ್ಲಿ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ
ಕಳೆದ ಸಾಲಿನ ವಸತಿ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದ ವಿ. ಅಕಾಡೆಮಿ
2023-24ರ ನವೋದಯ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದ ವಿದ್ಯಾಮಾತಾದ ವಿದ್ಯಾರ್ಥಿ
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದ್ದು, ಎಲ್ಲಾ ವಸತಿ ಶಾಲೆಗಳ 6ನೇ ಮತ್ತು 9ನೇ ತರಗತಿಯ ಪ್ರವೇಶಾತಿಯನ್ನು ಬಯಸುವ ವಿದ್ಯಾರ್ಥಿಗಳು ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿಯ ಸೌಲಭ್ಯವನ್ನು ಪಡೆದುಕೊಳ್ಳಲು ಸಂಸ್ಥೆಯ ಕೇಂದ್ರ ಕಚೇರಿಯಾದ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಹಾಗೂ ಸಂಸ್ಥೆಯ ಸುಳ್ಯ ಶಾಖೆಯನ್ನು ಸಂಪರ್ಕಿಸಿ ತಕ್ಷಣವೆ ದಾಖಲಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕಳೆದ ಸಾಲಿನಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದ ಸಂಸ್ಥೆ
2023-24ನೇ ಸಾಲಿನಲ್ಲಿ ನಡೆದ ನವೋದಯ/ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಪೂರಕವಾಗಿ ತರಬೇತಿಯನ್ನು ನೀಡಿದ್ದ ವಿದ್ಯಾಮಾತಾ ಅಕಾಡೆಮಿಯು ನವೋದಯ ಶಾಲಾ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ಸಂಸ್ಥೆಯ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದು ಗಮನಿಸಬೇಕಾದ ಅಂಶವಾಗಿದ್ದು, ಅದೇ ರೀತಿ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ತನ್ನ ಮೊದಲ ತರಬೇತಿಯಲ್ಲೇ ಶೇ.100 ಫಲಿತಾಂಶ ಪಡೆಯುವ ಮೂಲಕ ಅಮೋಘ ಸಾಧನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿರುವುದು ಸಂಸ್ಥೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ.
ವಸತಿ ಶಾಲೆಗಳ ಪ್ರವೇಶಕ್ಕೆ ಸಂಬಂಧಿಸಿದ ಅರ್ಹತೆಗಳು ಆಯಾ ವಸತಿ ಶಾಲಾ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸುವ ಸಂದರ್ಭದಲ್ಲಿ ಪ್ರಕಟಿಸುವ ಅದಿಸೂಚನೆಯಲ್ಲಿ ಪ್ರಕಟಗೊಳ್ಳುತ್ತದೆ.
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9620468869 / 9148935808
ಸುಳ್ಯ ಶಾಖೆ:
ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606