ಬಡಗನ್ನೂರು : ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಮಾತೃ ಸಂಸ್ಥೆ ದ್ವಾರಕ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಜೂ.5 ರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆವರಣದಲ್ಲಿ ಆಚರಿಸಲಾಯಿತು..

ಕಾರ್ಯಕ್ರಮವನ್ನು ಪಾಣಾಜೆ ಉಪವಲಯ ಅರಣ್ಯ ಅಧಿಕಾರಿ ಮದನ್ ಬಿ.ಕೆ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಭಾ ಕಾರ್ಯಕ್ರಮ:-
ಸಭಾ ಕಾರ್ಯಕ್ರಮವನ್ನು ಶ್ರೀ ಕೃಷ್ಣ ವಿದ್ಯಾಸಂಸ್ಥೆ ಸಂಚಾಲಕ ವಿಘ್ನೇಶ್ ಹಿರಣ್ಯ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಪ್ಲಾಸ್ಟಿಕ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಪ್ರತಿಭಾ ಪ್ರೌಢಶಾಲಾ ಮುಖ್ಯ ಗುರು ಸುಮನಾ.ಬಿ ವಿಶ್ವ ಪರಿಸರ ದಿನದ ಮಹತ್ವದ ಬಗ್ಗೆ ತಿಳಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಮಾಜಿ ಅಧ್ಯಕ್ಷೆ ರೇಖಾ ನಾಗರಾಜ್,ಪ್ರತಿಭಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಲಿಂಗಪ್ಪಗೌಡ ಮೋಡಿಕೆ,ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕೇಶವ ಪ್ರಸಾದ್, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಜಗೋಪಾಲ ಎನ್ ಉಪಸ್ಥಿತರಿದ್ದರು.
ಬಹುಮಾನ ವಿತರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವರ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ಶಿಕ್ಷಕ.ಕೆ.ರಾಮಚಂದ್ರಪ್ಪ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ವಿಶ್ವನಾಥ.ಬಿ.ರವರು ವಾಚಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿಯಾದ ನವ್ಯಶ್ರೀ ಸ್ವಾಗತಿಸಿ, ಮಮತಾ ಪಿ ವಂದಿಸಿದರು. ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕಿಯಾದ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರು ಪ್ರತಿಭಾ ಪ್ರೌಢಶಾಲೆಯ ಶಿಕ್ಷಕರು ವಿವಿಧ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳ ವತಿಯಿಂದ ಪರಿಸರಕ್ಕೆ ಸಂಬಂಧಪಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.