ಪುತ್ತೂರು: ಅನಂತಾಡಿ ಗ್ರಾಮ ಪಂಚಾಯತ್ , ಸಂಜೀವಿನಿ ಒಕ್ಕೂಟ ಇದರ ಸಹಯೋಗದೊಂದಿಗೆ ಬಂಟ್ರಿಂಜ ಪ್ರಾಥಮಿಕ ಶಾಲೆಯಲ್ಲಿ ಮಾಹಿತಿ ನೀಡುವ ಮತ್ತು ಗಿಡ ನೆಡುವ ಕಾರ್ಯಕ್ರಮ ಜೂ.5ರಂದು ನಡೆಯಿತು. ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ವಿಶೇಷ ಆಂದೋಲನ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ,ಸಿಬ್ಬಂದಿಗಳು ಬಂಟ್ರಿಂಜ ಶಾಲಾ ಮುಖ್ಯೋಪಾಧ್ಯಾಯರು, SDMC ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕರು/ ಬಿ. ಆರ್. ಪಿ, MBK, ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.