ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದಿ.ಉರಿಮಜಲು ರಾಮ ಭಟ್ ಜನ್ಮದಿನಾಚರಣೆ

0

ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ದಿ.ಉರಿಮಜಲು ರಾಮ ಭಟ್ ಅವರ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಮಾತನಾಡಿ, “ವ್ಯಕ್ತಿ ನೆಲೆಯಲ್ಲಿ ಸಂಸ್ಥೆಗಳನ್ನು ಸ್ಥಾಪಿಸುವುದಕ್ಕಿಂತ ಸಾಂಸ್ಥಿಕ ನೆಲೆಯಲ್ಲಿ ಸಂಸ್ಥೆಯ ಸ್ಥಾಪನೆ ಮಾಡುವುದು ಅನುಕೂಲ ಎಂಬ ವಿಷಯವನ್ನು ಮನಗಂಡು ಪುತ್ತೂರು ಎಜುಕೇಶನ್ ಸೊಸೈಟಿ ಎಂಬ ಹೆಸರಿನೊಂದಿಗೆ ವಿವೇಕಾನಂದ ವಿದ್ಯಾಸಂಸ್ಥೆ ಸ್ಥಾಪನೆಗೊಂಡಿತು. ಇದರ ಅಂಗವಾಗಿ 1965 ರಲ್ಲಿ ಪ್ರಾರಂಭಗೊಂಡ ಮೊತ್ತಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು. ಇವರು ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದರು. ಓರ್ವ ಶಾಸಕರಾಗಿ, ಸಾಮಾಜಿಕ ನೇತಾರರಾಗಿ, ಸಮಾಜದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ತುರ್ತು ಪರಿಸ್ಥಿತಿಯ ಸಂದರ್ಭ ಜೈಲುವಾಸ ಅನುಭವಿಸಿದ್ದಾರೆ ಕಡಲತಡಿಯ ಭಾರ್ಗವ ಎಂದು ಖ್ಯಾತಿ ಹೊಂದಿರುವ ಶಿವರಾಮ ಕಾರಂತರ ಆತ್ಮೀಯ ಅನುಯಾಯಿಯಾಗಿದ್ದರು. ಇಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಒಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಇದರ ಹಿಂದಿನ ಪ್ರೇರಕ ಶಕ್ತಿ ಉರಿಮಜಲು ರಾಮ್ ಭಟ್‌ ಅವರ ಕಾರ್ಯಸ್ಮರಣೀಯ” ಎಂದು ಹೇಳಿದರು.

       ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್,  ಉಪನ್ಯಾಸಕ- ಉಪನ್ಯಾಸಕೇತರ ವೃಂದದವರು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here