ಬೆಟ್ಟಂಪಾಡಿ: ಸರಕಾರಿ ಪದವಿ ಪೂರ್ವ ಕಾಲೇಜು-ವಿಶ್ವ ಪರಿಸರ ದಿನಾಚರಣೆ

0

ಬೆಟ್ಟಂಪಾಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿ ಇಲ್ಲಿ ಜೂ.5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ರಜಾಕ್ ಕೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸುಬ್ರಮಣ್ಯರಾವ್ ಇವರು ತೇಗದ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಹಿತ್ತಲಲ್ಲಿ ಗಿಡಗಳನ್ನು ನೆಡುವುದು ಮತ್ತು ಪ್ಲಾಸ್ಟಿಕ್ ನಂತಹ ಮಲಿನಕಾರಿಗಳನ್ನು ಪರಿಸರದಿಂದ ತೊಲಗಿಸುವುದರ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಈಕೋ ಕ್ಲಬ್ ನ ಸಂಯೋಜಕಿ, ಜೀವಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಎಂ ಕಾರ್ಯಕ್ರಮ ಸಂಘಟಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಕಮಲಾಕ್ಷ ಎ ಸಹಕರಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here