ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಾಂಕೇತಿಕವಾಗಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಯಾಗಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಸ್ಯಶಾಸ್ತ್ರದ ಉಪನ್ಯಾಸಕ ಹರ್ಷಿತ್ ಮಾತನಾಡಿ ಪರಿಸರ ದಿನಾಚರಣೆ ಎನ್ನುವಂಥದ್ದು ಒಂದು ದಿವಸಕ್ಕೆ ಸೀಮಿತವಾಗಿರದೆ ಪ್ರತಿದಿನ ನಾವು ಪ್ರಕೃತಿಯನ್ನು ಪೂಜಿಸಬೇಕು ಮತ್ತು ಬೆಳೆಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಗುರು ವಂ| ಮ್ಯಾಕ್ಸಿಮ್ ಡಿಸೋಜ ಮಾತನಾಡಿ ಪರಿಸರದ ಜೀವಿಗಳನ್ನು ಮತ್ತು ಸಸ್ಯಗಳನ್ನು ಪ್ರೀತಿಸುತ್ತಾ, ಪ್ರಕೃತಿಯೊಂದಿಗೆ ಒಡನಾಟ ಇಟ್ಟುಕೊಂಡು ಬದುಕಬೇಕು. ಪರಿಸರವನ್ನು ಸ್ವಚ್ಛವಾಗಿರಿಸಬೇಕು. ಉತ್ತಮ ಆರೋಗ್ಯಕ್ಕೆ ಉತ್ತಮ ಪರಿಸರದ ಅಗತ್ಯತೆ ಇದೆ ಎಂದರು.
ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಿರಿಯ ಶಿಕ್ಷಕಿ ಕಾರ್ಮಿನ್ ಪಾಯ್ಸ್ ಸ್ವಾಗತಿಸಿ ಇಕೋ ಕ್ಲಬ್ ನಿಸರ್ಗ ಇದರ ಮೇಲ್ವಿಚಾರಕ ಬೆನೆಟ್ ಮೊಂತೆರೊ ಕಾರ್ಯಕ್ರಮ ಆಯೋಜಿಸಿ ವಂದಿಸಿದರು.