ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಮುಖ್ಯ ಅತಿಥಿಯಾಗಿದ್ದ ಡಾ.ರವೀಂದ್ರ ಐತಾಳ್ ಅವರು ವಿದ್ಯಾರ್ಥಿಗಳಿಗೆ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ಸಾವಯವ ಕೃಷಿಯ ಮೂಲಕ ಪರಿಸರವನ್ನು ಉಳಿಸಬೇಕೆಂಬ ಸಂದೇಶವನ್ನು ನೀಡಿದ ಅವರು, ವಿದ್ಯಾರ್ಥಿಗಳು ಪರಿಸರದೊಂದಿಗೆ ಬೆಳೆದು, ಉಪಯೋಗದ ಮರಗಳನ್ನು ನೆಡುವ ಮೂಲಕ ನೈಸರ್ಗಿಕ ವಾಸಸ್ಥಳಗಳನ್ನು ಪ್ರಾಣಿ-ಪಕ್ಷಿಗಳಿಗೆ ಒದಗಿಸಬೇಕೆಂದು ಪ್ರೇರಣೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿದ್ದರು. “ಪ್ಲಾಸ್ಟಿಕ್ ಮುಕ್ತ ಪರಿಸರ” ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಹಾಡು, ಭಾಷಣ, ಅಭಿನಯಗೀತೆಗಳ ಮೂಲಕ ಜಾಗೃತಿ ಮೂಡಿಸಿದರು.
ಶಿಕ್ಷಕಿ ಜೋಸ್ಲಿನ್ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ವೀಕಲಾ ವಂದಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.