ಕೆಮ್ಮಾಯಿ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಕೆಮ್ಮಾಯಿ ಶಾಲೆಯಲ್ಲಿ ಜೂ.2ರಂದು 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಡೆಯಿತು.
ಶಾಲಾ ವಿದ್ಯಾರ್ಥಿಗಳನ್ನು ಮೆರವಣಿಗೆ ಬ್ಯಾಂಡ್ ವಾದ್ಯ ಘೋಷದೊಂದಿಗೆ ಕರೆತಂದು ಹೊಸದಾಗಿ ದಾಖಲಾದ LKG UKG ಮತ್ತು ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಆರತಿಯೊಂದಿಗೆ ಪುಷ್ಪವನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ರವಿ ಇವರು ವಹಿಸಿದ್ದರು. ಶಾಲಾ ಮುಖ್ಯ ಗುರುಗಳಾದ ಮರಿಯಮ್ಮ ಪಿ ಎಸ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸರ್ವರನ್ನು ಸ್ವಾಗತಿಸಿದರು.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಇವರು ನಮ್ಮ ಕೆಮ್ಮಾಯಿ ಶಾಲೆಯಲ್ಲಿ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸದ ಜೊತೆಗೆ ಮೌಲ್ಯಯುತವಾದ ವ್ಯಕ್ತಿತ್ವವನ್ನು ಬದುಕಿನಲ್ಲಿ ರೂಪಿಸಿಕೊಂಡು ಬರಲು ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಶಾಲೆಗೆ ಬೇಕಾದ ಎಲ್ಲಾ ಸಹಕಾರವನ್ನು ನಾವು ನೀಡಲು ಸಿದ್ದರಿದ್ದೇವೆ ಎಂದು ಹೇಳಿ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರಕಾರದಿಂದ ನೀಡಿದ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಕುಸುಮಾವತಿ ಪಿ ಇವರು ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಶಾಲಾ ಎಸ್. ಡಿ.ಎಂ.ಸಿ ಉಪಾಧ್ಯಕ್ಷರಾದ ರೆಹಮತ್ ಎಸ್ ಡಿಎಂಸಿ ಸದಸ್ಯರು ಪೋಷಕರು ವಿದ್ಯಾರ್ಥಿಗಳು ಶಿಕ್ಷಕರು ಹಾಜರಿದ್ದರು. ಶಾಲೆಯಲ್ಲಿ ನೂತನವಾಗಿ ಪ್ರಾರಂಭವಾದ LKG ಯುಕೆಜಿ ತರಗತಿಗಳಿಗೆ ಅಗತ್ಯವಾದ 15 ಕುರ್ಚಿಗಳನ್ನು ಕುಳುರು ಕೃಷ್ಣ ಭಟ್ ಮತ್ತು ಮನೆಯವರು ಶ್ರೀನಿಲಯ ಆನೆ ಮಜಲು ಇವರು ಉಚಿತವಾಗಿ ನೀಡಿ ಸಹಕರಿಸಿದರು. ಸಹ ಶಿಕ್ಷಕಿ ಶ್ರುತಿ, ಯು ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿಯಾದ ನಾಗವೇಣಿ ಅವರು ವಂದಿಸಿದರು. ಎಲ್ಲಾ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರು ಸಹಕರಿಸಿದರು.

LEAVE A REPLY

Please enter your comment!
Please enter your name here