ನೆಲ್ಯಾಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಜೂ.2ರಂದು ನಡೆಯಿತು.

ಶಾಲಾ ಮುಖ್ಯಶಿಕ್ಷಕಿ ವಿದ್ಯಾ ಅವರು ಶಾಲಾ ಪ್ರಾರಂಭೋತ್ಸವದ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಎಸ್‌ಡಿಎಂಸಿ ಸದಸ್ಯೆ ನವ್ಯ ಪುಸ್ತಕ ವಿತರಿಸಿದರು. ಉಪ್ಪಿನಂಗಡಿ ಠಾಣೆ ಉಪನಿರೀಕ್ಷಕರಾದ ಕವಿತಾ, ಹೆಡ್‌ಕಾನ್ಸ್‌ಸ್ಟೇಬಲ್ ದೇವಿಕಾ ಉಪಸ್ಥಿತರಿದ್ದರು. ಶಿಕ್ಷಕಿ ಮಾಲತಿ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ಚಿತ್ರಾವತಿ, ಪವಿತ್ರ ಸಹಕರಿಸಿದರು. ವಿದ್ಯಾರ್ಥಿಗಳು, ಪೋಷಕರು, ಅಕ್ಷರದಾಸೋಹ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.