ಕಾವು : ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಇಲ್ಲಿ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಪಾಣಾಜೆ ವಲಯ ಅರಣ್ಯ ಅಧಿಕಾರಿ ಮದನ್ ಬಿ ಕೆ, ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಬೀಟ್ ಫಾರೆಸ್ಟರ್ ಸುಧೀರ್,ಶಾಲಾ ಆಡಳಿತ ಸಲಹೆಗಾರ ಕೃಷ್ಣಪ್ರಸಾದ್, ಕಾರ್ಯಕ್ರಮ ಸಂಯೋಜಕ ಉಮೇಶ್ ನಾಯಕ್ ಉಪಸ್ಥಿತರಿದ್ದರು. ವೇದಿಕೆ ಮುಂಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕ ಉಮೇಶ್ ನಾಯ್ಕ್ ಎಲ್ಲರನ್ನೂ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು .ನಂತರ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆಯವರು ನೀಡಿದ ಸಸಿಗಳನ್ನು ನೆಟ್ಟು ನೀರುಣಿಸಲಾಯಿತು. ಆ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬದ್ರುದ್ದೀನ್ ಇವರು ಎಲ್ಲರಿಗೂ ಶುಭ ಹಾರೈಸಿದರು..