ನಾಳೆ(ಜೂ.9)ಬನ್ನೂರು ಶಾಲೆಯಲ್ಲಿ ತರಗತಿ ಕೊಠಡಿಗಳ ಉದ್ಘಾಟನೆ

0

ಪುತ್ತೂರು: ಶತಮಾನದ ಹೊಸ್ತಿರಲಲ್ಲಿರುವ ಬನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಆರ್‌ಇಎಲ್‌ನ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಾಣಗೊಂಡಿರುವ ಎರಡು ತರಗತಿ ಕೊಠಡಿಗಳು ಜೂ.9ರಂದು ಉದ್ಘಾಟನೆಗೊಳ್ಳಲಿದೆ.


ಶಾಸಕ ಅಶೋಕ್ ಕುಮಾರ್ ರೈ ನೂತನ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸದಸ್ಯೆ ಗೌರಿ ಬನ್ನೂರು ಸಹಿತ ಹಲವು ಮಂದಿ ಜನಪ್ರತಿನಿಧಿಗಳ ಅತಿಥಿಗಳಾಗಿ ಆಗಮಿಸಲಿದ್ದಾರೆ.


ಶಾಲೆಯಲ್ಲಿ 2026ರ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಶಾಲಾ ಶತಮಾನೋತ್ಸವ ಸಂಭ್ರಮ ನಡೆಯಲಿದ್ದು ಇದರ ಶತಮಾನೋತ್ಸವ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಿತಿಗಳನ್ನು ರಚನೆ ಮಾಡಲಾಗುವುದು ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here