ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ ಹಾಗೂ ಬಸ್ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ.15 ರಂದು ನಡೆದಿತ್ತು.
ಅಬ್ದುಲ್ ಕುಂಞಿಯನ್ನು ವಶಕ್ಕೆ ಪಡೆದಿದ್ದ ಸುಳ್ಯ ಪೊಲೀಸರು ವಿಚಾರಣೆ ನಡೆಸಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 74 ಹಾಗೂ ಮಕ್ಕಳಿಗೆ ಲೈಂಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪೊಕ್ಸೋ ಪ್ರಕರಣ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು. ಬಳಿಕ ಆರೋಪಿಗೆ ಜಾಮೀನು ಕೋರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪುತ್ತೂರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಆರೋಪಿಯ ಪರವಾಗಿ ವಕೀಲ ಪಿಎಂ ಮೊಹಮ್ಮದ್ ರಿಯಾಜ್ ವಾದ ಮಂಡಿಸಿದ್ದಾರೆ.
ಏನಿದು ಘಟನೆ :
ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞಿ ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆನ್ನಲಾಗಿದೆ.
ಅಬ್ದುಲ್ ಕುಂಞಿಯನ್ನು ವಶಕ್ಕೆ ಪಡೆದಿದ್ದ ಸುಳ್ಯ ಪೊಲೀಸರು ವಿಚಾರಣೆ ನಡೆಸಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 74 ಹಾಗೂ ಮಕ್ಕಳಿಗೆ ಲೈಂಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (POCSO Act) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.