ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ಹಾಗೂ ಪೋಷಕರ ಸಭೆ ನಡೆಯಿತು.
ಸಮಾರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ನೀಡಿದರು. ಸಂಸ್ಥೆಯ ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.
ಉಪನ್ಯಾಸಕಿಯರಾದ ಸ್ವಾತಿ ಬಿ.ಎಸ್. ಸ್ವಾಗತಿಸಿದರು. ಸೌಮ್ಯ ಕೆ. ವಂದಿಸಿದರು. ರಜತ ಎಂ. ಕಾರ್ಯಕ್ರಮ ನಿರೂಪಿಸಿದರು.