ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾತ್ರಿಕನೋರ್ವ ರೂಮ್ ಬಗ್ಗೆ ವಿಚಾರಿಸಿ ರೂಮ್ ಪಡೆಯಲಿಲ್ಲ ಎಂದು ಆರೋಪಿಸಿ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಸುಬ್ರಹ್ಮಣ್ಯದಲ್ಲಿ ಹಲ್ಲೆ ನಡೆಸಲಾಗಿದೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ವಿಡಿಯೋ ಆಧರಿಸಿ ಕೆಲವರನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ.