ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯದಿಂದ ಉಚಿತ ನೇತ್ರ ತಪಾಸಣಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜೂ.10ರಂದು ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ಪುತ್ತೂರು ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.

ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ಪುತ್ತೂರು ರೋಟರಿ ಕ್ಲಬ್ ಈಗಾಗಲೇ ರೋಟರಿಪುರದಲ್ಲಿ ಫಲಾನುಭವಿಗಳಿಗೆ ಮನೆ ನಿರ್ಮಾಣ, ಅಶಕ್ತರಿಗೆ ಅಗತ್ಯ ಸಂದರ್ಭದಲ್ಲಿ ನೆರವು, ಅಂಗನವಾಡಿಗಳ ಅಭಿವೃದ್ಧಿ ಮುಂತಾದ ಕೊಡುಗೆಗಳೊಂದಿಗೆ ಬ್ಲಡ್ ಬ್ಯಾಂಕ್, ಡಯಾಲಿಸಿಸ್ ಕೇಂದ್ರ ಮುಂತಾದ ಶಾಶ್ವತ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು ಇದೀಗ ಮತ್ತೊಂದು ಶಾಶ್ವತ ಯೋಜನೆಯಾದ ಕಣ್ಣಿನ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದೆ. ಈ ಕಣ್ಣಿನ ಆಸ್ಪತ್ರೆಯಲ್ಲಿ ಇದೀಗ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು, ಬಿಪಿಎಲ್ ಕಾರ್ಡುದಾರರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಮಾಡಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ರೋಟರಿ ಕ್ಲಬ್ ಪುತ್ತೂರು ಕಾರ್ಯದರ್ಶಿ ದಾಮೋದರ್ ಕೆ, ಸಮುದಾಯ ಸೇವಾ ನಿರ್ದೇಶಕ ರಾಜ್ ಗೋಪಾಲ್ ಬಲ್ಲಾಳ್, ರೋಟರಿ ಕ್ಲಬ್ ಸಾಧ್ಯಸರು ಶ್ರೀಧರ್ ಗೌಡ ಕಣಜಲು ,ವೈದ್ಯೆ ಡಾ.ಅಂಬಿಕಾ, ರೋಟರಿ ಪುತ್ತೂರು ಚಾರಿಟೇಬಲ್ ಟ್ರಸ್ಟ್ ಪಿ.ಆರ್.ಒ ಅವಿನ್ , ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here