ಮುಕ್ರಂಪಾಡಿ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

0

ಪುತ್ತೂರು: ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು, ಮುಕ್ರಂಪಾಡಿ ಪುತ್ತೂರು ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಪ್ರಾರಂಭೋತ್ಸವ ಸಮಾರಂಭ ನಡೆಯಿತು.

ಕಾಲೇಜಿನ ಎಲ್ಲಾ ಮಕ್ಕಳಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ವತಿಯಿಂದ ಲೇಖನಿಗಳನ್ನು ಹಾಗೂ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ ಅಧ್ಯಕ್ಷೆ ಮತ್ತು ಕಾರ್ಯಕಾರಿ ಆಡಳಿತ ಮಂಡಳಿ ಕಾರ್ಯ ಅಧ್ಯಕ್ಷೆ ಮಲ್ಲಿಕಾಜೆ ರೈಯವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿರ್ದೇಶಕ ಚಂದ್ರಕಾಂತ್ ಉಪಸ್ಥಿತರಿದ್ದರು. ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಕಾಲೇಜು ಆಡಳಿತ ಮಂಡಳಿಯ ಸದಸ್ಯರು, ಕ್ಲರ್ಕ್, ಹಾಗೂ ಪದವಿಪೂರ್ವ ಬಾಲಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here