ಕಾಣಿಯೂರು: ಬೆಳಂದೂರು ಸ.ಹಿ. ಪ್ರಾ.ಶಾಲೆಯಲ್ಲಿ ಸರ್ಕಾರದಿಂದ ಒದಗಿಸಲಾದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರವನ್ನು ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತೇಜಾಕ್ಷಿ ಕೊಡಂಗೆಯವರು ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಡಿಎಂಸಿ ಅಧ್ಯಕ್ಷ ಭವಾನಿ ಶಂಕರ್ ಅಗಳಿ, ಹಾಗೂ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಜಾನಕಿ ಸ್ವಾಗತಿಸಿ, ವಂದಿಸಿದರು. ಶಿಕ್ಷಕ ವರ್ಗದವರು ಸಹಕರಿಸಿದರು.