ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಾಶಿಕಟ್ಟೆ ಮಾರ್ಗದಲ್ಲಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಜೂ.8 ರಂದು ನಡೆದಿದೆ ಎನ್ನಲಾದ ಹಲ್ಲೆಗೆ ಸಂಬಂಧಿಸಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ನಡೆಸಿ ಶಂಕರ್ ಎಂಬಾತನ ಮೇಲೆ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕಲಂ:126(2),115(2),352 BNS ರಂತೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.