ಕಾಣಿಯೂರು ಶಾಲೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಸ. ಹಿ.ಪ್ರಾ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ದಿನಾಚರಣೆಯು ಜೂ 11ರಂದು ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಕ್ರೀಡೆಗಳ ಮಹತ್ವ, ಮನುಷ್ಯನ ಆರೋಗ್ಯದ ಮೇಲೆ ಕ್ರೀಡೆಗಳ ಪರಿಣಾಮ, ಪ್ರಭಾವಗಳ ಬಗ್ಗೆ ಮಾಹಿತಿ ನೀಡಲಾಯಿತು. ಹಾಗೆಯೇ ಮಕ್ಕಳಿಗೆ ವಿವಿಧ ಪಂದ್ಯಾಟಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ಡಾರ್ಜ್ ಬಾಲ್, ಶಿಕ್ಷಕಿಯರಿಗೆ ಸಂಗೀತ ಕುರ್ಚಿ ಮುಂತಾದ ಕ್ರೀಡೆಗಳನ್ನು ಏರ್ಪಡಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಪ್ರಭಾರ ಮುಖ್ಯಗುರು ಬಾಲಕೃಷ್ಣ ಕೆ ತೀರ್ಪುಗಾರರಾಗಿ ಸಹಕರಿಸಿದರು.

LEAVE A REPLY

Please enter your comment!
Please enter your name here