ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಕಾಣಿಯೂರು: ಮೇ.30ರಂದು ಸುರಿದ ಭಾರೀ ಮಳೆಯಿಂದಾಗಿ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕಿಸುವ ಪುತ್ತೂರು- ಕಾಣಿಯೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಬೈತಡ್ಕ ಎಂಬಲ್ಲಿ ರಾಜ್ಯ ಹೆದ್ದಾರಿ ರಸ್ತೆ ಬದಿ ಕುಸಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಜೂ.11ರಂದು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕರು ಮಳೆಹಾನಿಯಲ್ಲಿ ಸೇರಿಕೊಂಡು ತಕ್ಷಣ ಸರಿಪಡಿಸಲು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಜಿ.ಪಂ. ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಅಗಳಿ ಮೊದಲಾದವರು ಇದ್ದರು.