ಬೆಟ್ಟಂಪಾಡಿ ಸರಕಾರಿ ಪ.ಪೂ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ರಜಾಕ್ ಕೆ. ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸುಬ್ರಹ್ಮಣ್ಯ ರಾವ್‌ರವರು ತೇಗದ ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಡಾ|ಅಬ್ದುಲ್ ರಜಾಕ್ ಕೆ. ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವ ತಿಳಿಸಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಹಿತ್ತಲಲ್ಲಿ ಗಿಡಗಳನ್ನು ನೆಡುವುದು ಮತ್ತು ಪ್ಲಾಸ್ಟಿಕ್ ನಂತಹ ಮಲಿನಕಾರಿಗಳನ್ನು ಪರಿಸರದಿಂದ ತೊಲಗಿಸುವುದರ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಈಕೋ ಕ್ಲಬ್ ಸಂಯೋಜಕಿ ಜೀವಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಎಂ. ಕಾರ್ಯಕ್ರಮ ಸಂಘಟಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಕಮಲಾಕ್ಷ ಎ. ಸಹಕರಿಸಿದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here