ಗುಜರಾತ್ ನ ಅಹಮದಾಬಾದ್ ನಲ್ಲಿ ಒಟ್ಟು 242 ಮಂದಿ ಜನರಿದ್ದ ಏರ್ ಇಂಡಿಯಾ (Air India) ವಿಮಾನ ಜೂ.12ರಂದು ಮಧ್ಯಾಹ್ನ ಪತನವಾಗಿದೆ.
ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ರಿಕ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 1:10ಕ್ಕೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿದೆ.
ಪತನವಾದ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಸಭಾ ಸದಸ್ಯ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಅವರು ಲಂಡನ್ ನಲ್ಲಿ ನೆಲೆಸಿರುವ ತಮ್ಮ ಮಗಳನ್ನು ಭೇಟಿಯಾಗಲು ತೆರಳುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ಗುಜರಾತ್ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ.