ಅಮ್ಚಿನಡ್ಕ: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಮಹೇಂದ್ರ ಎಕ್ಸ್ ಯುವಿ (ಕೆ.ಎ21 ಎನ್9886) ಕಾರೊಂದು ಅಮ್ಚಿನಡ್ಕದ ಕುಡ್ಪಿನಡ್ಕದಲ್ಲಿ ಪಲ್ಟಿಯಾದ ಘಟನೆ ನಡೆದಿದೆ.
ಕಾರು ರಸ್ತೆಯಿಂದ ಚರಂಡಿಗೆ ಇಳಿದಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದು ಕಾವಿನಲ್ಲಿರುವ ಕಟ್ಟಡವೊಂದರ ಮಾಲಕರ ಕಾರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.