ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ (ಜೂ.16)
ರೆಡ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
