
ನೆಲ್ಯಾಡಿ : ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಜೂ.15ರಂದು ತಡರಾತ್ರಿ ನಡೆದಿದೆ.
ಕಾರ್ಕಳ ನಿವಾಸಿ ಶಂಕರನಾರಾಯಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಬಸ್ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.