ದೋಳ್ಪಾಡಿ- ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಕಾಣಿಯೂರು: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಸೋಮವಾರ ಮೃತಪಟ್ಟ ಜಲಜಾಕ್ಷಿ (ರೇಖಾ )ಅವರ ಮನೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಜೂ 17ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ಅನಾಹುತಗಳು ಮುಂದೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಶಾಸಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮೃತರ ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವರಾಮ ಡಿ ಹೆಚ್, ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾಡು, ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್. ಬಿ ಹಾಗೂ ಸಿಬ್ಬಂದಿಯವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖಾ ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here