ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ ನಾಯಕನಾಗಿ ಜೀತನ್, ಉಪನಾಯಕಿಯಾಗಿ ಮರಿಯಂ ವಿಜ್ದಾನ್

0

ಪುತ್ತೂರು: 2025-26ನೇ ಸಾಲಿನ ಶಾಲಾ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕಿ ಸ್ಥಾನಕ್ಕೆ ಚುನಾವಣೆ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಯಿತು. ಪ್ರತಿ ಸ್ಥಾನಕ್ಕೂ ತಲಾ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಶಾಲಾ ನಾಯಕನಾಗಿ 10ನೇ ತರಗತಿಯ ಜೀತನ್ ಹಾಗೂ ಉಪನಾಯಕಿಯಾಗಿ 9ನೇ ತರಗತಿಯ ಮರಿಯಂ ವಿಜ್ದಾನ್ ಆಯ್ಕೆಯಾಗಿದ್ದಾರೆ.

ಮುಖ್ಯ ಚುನಾವಣಾ ಅಧಿಕಾರಿಯಾಗಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಮ್ಯಾಕ್ಸಿಮ್ ಡಿಸೋಜಾ ಮಾರ್ಗದರ್ಶನ ನೀಡಿದರು. ಸಹಾಯಕ ಚುನಾವಣಾ ಅಧಿಕಾರಿಯಾಗಿ ರೇಷ್ಮಾ ಮೇರಿ ರೆಬೆಲ್ಲೊ ಮತ್ತು ನರೇಶ್ ಲೋಬೊ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರು ಸಹಕರಿಸಿದರು. ವಿದ್ಯಾರ್ಥಿಗಳಿಗೆ ಶಾಲಾ ಗುರುತಿನ ಚೀಟಿಯನ್ನು ತೋರಿಸುವುದರ ಮೂಲಕ ಮತದಾನಕ್ಕೆ ಅವಕಾಶವನ್ನು ನೀಡಲಾಯಿತು.

LEAVE A REPLY

Please enter your comment!
Please enter your name here